ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರಿಗೆ ಅನಾರೋಗ್ಯ ಕಾಡಿದ್ದು, ಚಿಕಿತ್ಸೆಗಾಗಿ ಅಮೆರಿಕಾಗೆ ಕರೆದುಕೊಂಡು ಹೋಗಲಾಗಿದೆ.
ಧರ್ಮೇಂದ್ರ ಅವರಿಗೆ 87 ವರ್ಷವಾಗಿದ್ದು, ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದಾರೆ, ಧರ್ಮೇಂದ್ರ ಅವರ ಪುತ್ರ ಸನ್ನಿ ಡಿಯೋಲ್ ತಂದೆಯ ಜೊತೆ ಅಮೆರಿಕಕ್ಕೆ ತೆರಳಿದ್ದಾರೆ.
ಇನ್ನೂ 20 ದಿನಗಳ ಕಾಲ ಚಿಕಿತ್ಸೆ ಕೊಡಿಸಬೇಕಾಗಿದ್ದು, ಚಿಕಿತ್ಸೆ ನಂತರ ಇಬ್ಬರೂ ಭಾರತಕ್ಕೆ ಆಗಮಿಸಿದ್ದಾರೆ. ತಂದೆಯ ಆರೋಗ್ಯ ಸ್ಥಿರವಾಗಿದೆ, ಅಭಿಮಾನಿಗಳು ಆತಂಕ ಪಡಬೇಕಿಲ್ಲ ಎಂದು ಸನ್ನಿ ಡಿಯೋಲ್ ತಿಳಿಸಿದ್ದಾರೆ.