ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಿಥುನ್ ಚಕ್ರವರ್ತಿ ಅವರ ಆಪ್ತ ಮೂಲಗಳ ಪ್ರಕಾರ ಅನಾರೋಗ್ಯ ಉಂಟಾದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.