ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಚೇತರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.

73 ವರ್ಷದ ಮಿಥುನ್ ಚಕ್ರವರ್ತಿಗೆ ಶನಿವಾರ ಎದೆ ನೋವು ಕಾಣಿಸಿದ್ದು, ಶೀಘ್ರವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇನ್ನೊಂದು ರೌಂಡ್ ಚೆಕಪ್ ನಂತರ ಮಿಥುನ್ ಅವರನ್ನು ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ವೈದ್ಯರು ತಿಳಿಸಿದ್ದು, ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!