ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಲಿವುಡ್‌ನ ಹಿರಿಯ ನಟ ಮತ್ತು ಟಿವಿ ನಟ ಸತೀಶ್ ಷಾ ನಿಧನರಾಗಿದ್ದಾರೆ.
ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ನಟ ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಾರಾಭಾಯ್ ವರ್ಸಸ್ ಸಾರಾಭಾಯ್ ಸಿನಿಮಾದಲ್ಲಿ ನಟಿಸಿದ ನಂತರ ಸತೀಶ್ ಷಾ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ಯೇ ಜೋ ಹೇ ಝಿಂದಗಿ ಸೀರಿಯಲ್ ಮೂಲಕ ಜನರ ಮನಸ್ಸನ್ನು ಮುಟ್ಟಿದ್ದರು.
ಸತೀಶ್ ಷಾ ನಿಧನದ ಸುದ್ದಿಯನ್ನು ನಿರ್ಮಾಪಕ ಅಶೋಕ್ ಪಂಡಿತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪ್ರಸಿದ್ಧ ನಟನನ್ನು ಕಳೆದುಕೊಂಡು ಚಿತ್ರೋದ್ಯಮ ಬಡವಾಗಿದೆ ಎಂದು ಹೇಳಿದ್ದಾರೆ.

