ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ ವುಡ್ ಹಿರಿಯ ಹಾಸ್ಯನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿದೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದಬುಂದಿದೆ.
ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸಾಗಿದ್ದು, ಹಲವಾರು ಸಿನಿಮಾಗಳಲ್ಲಿ ತಮ್ಮ ಅದ್ಬುತ ನಟನೆಯ ಮೂಲಕ ಜನರ ಮನ್ನಣೆ ಪಡೆದಿದ್ದಾರೆ.
ಅವರು ಬೇಗ ಗುಣಮುಖರಾಗಿ ಬರಲೆಂದು ಅಭಿಮಾನಿಗಳು, ಕುಟುಂಬಸ್ಥರು ಹಾರೈಸಿದ್ದಾರೆ.