Sunday, December 21, 2025

ಪಂಚಭೂತಗಳಲ್ಲಿ ಲೀನವಾದ ಹಿರಿಯ ಹಾಸ್ಯ ನಟ ಉಮೇಶ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಚಭೂತಗಳಲ್ಲಿ ಹಿರಿಯ ಹಾಸ್ಯ ನಟ ಉಮೇಶ್ ಲೀನರಾಗಿದ್ದಾರೆ.

ಕಳೆದ ತಿಂಗಳು ಮನೆಯಲ್ಲಿ ಕಾಲು ಜಾರಿ ಬಿದ್ದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಎಂಆರ್​ಐ ಹಾಗೂ ಸಿಟಿ ಸ್ಕ್ಯಾನ್ ಮಾಡಿದ ಬಳಿಕ ಲಿವರ್​ನಲ್ಲಿ ದೊಡ್ಡ ಗಾತ್ರದ ಗಡ್ಡೆ ಇರುವುದು ಪತ್ತೆಯಾಗಿತ್ತು. ಲಿವರ್ ಕ್ಯಾನ್ಸರ್ ಆಗಿ ಅದು ಬೇರೆ ಬೇರೆ ಅಂಗಗಳಿಗೆ ಹರಡಿದೆ ಎಂಬುದು ತಿಳಿದುಬಂದಿತ್ತು. ಇಂದು ಅವರು ಕೊನೆಯುಸಿರೆಳೆದಿದ್ದಾರೆ.

ಕಿದ್ವಾಯಿ ಆಸ್ಪತ್ರೆಯಿಂದ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಜೆಪಿ ನಗರಕ್ಕೆ ಸ್ಥಳಾಂತರಿಸಲಾಯಿತು. ಅಲ್ಲಿ ಕೆಲಕಾಲ ಅಂತಿಮ ದರುಶನಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು. ಬಳಿಕ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ಅಂತಿಮ ದರುಶನಕ್ಕೆ ಅವಕಾಶ ಕಲ್ಪಿಸಲಾಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಉಮೇಶ್ ಅವರ ಅಂತಿಮ ದರುಶನ ಪಡೆದರು. ಬಳಿಕ ಬನಶಂಕರಿ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು.

error: Content is protected !!