ಹೊಸದಿಗಂತ , ಮಂಗಳೂರು:
ಮಾಧ್ಯಮ ರಂಗದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರು ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ.
ಮೂಲತಃ ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿಯೇ ನೆಲೆಸಿದ್ದರು. ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ “ನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ “ಉದಯವಾಣಿ’ ಮಂಗಳೂರು ವರದಿಗಾರರಾಗಿ 30 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿದ್ದರು. ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿಯೂ ಜವಾಬ್ದಾರಿ ನಿರ್ವಹಿಸಿದ್ದರು.ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.