Sunday, November 27, 2022

Latest Posts

ಕನ್ನಡದ ಹಿರಿಯ ನಟ ಲೋಹಿತಾಶ್ವ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕನ್ನಡದ ಹಿರಿಯ ನಟ ಲೋಹಿತಾಶ್ವ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಮಾರಸ್ವಾಮಿ ಲೇಔಟ್ ನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಲೋಹಿತಾಶ್ವರನ್ನು ತೀವ್ರ ನಿಘಾ ಘಟಕದಲ್ಲಿರಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಮಾಹಿತಿ ನೀಡಿದೆ.
ಕನ್ನಡ ಚಲನಚಿತ್ರ ನಟ ಮತ್ತು ನಾಟಕಕಾರ ಮತ್ತು ನಿವೃತ್ತ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದಾರೆ. ಅವರು ಐನೂರಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳು, ರಂಗ ನಾಟಕಗಳು ಮತ್ತು ದೂರದರ್ಶನ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ತಮ್ಮ ಪ್ರಾಬಲ್ಯದ ಧ್ವನಿಗೆ ಜನಪ್ರಿಯರಾಗಿದ್ದಾರೆ.
ಅವರ ಮಗ ನಟ ಶರತ್ ಲೋಹಿತಾಶ್ವ ಕನ್ನಡ ಸಿನಿಮಾರಂಗದಲ್ಲಿ ಜನಪ್ರಿಯ ಖಳನಟರಾಗಿ ಮಿಂಚುತ್ತಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!