Monday, January 12, 2026

ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್. ಉಮೇಶ್ ಇನ್ನಿಲ್ಲ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಚಿತ್ರರಂಗದ ಹಿರಿಯ ನಟ, ತಮ್ಮ ಸಹಜ ಅಭಿನಯ ಮತ್ತು ಹಾಸ್ಯ ಪಾತ್ರಗಳ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಎಂ.ಎಸ್. ಉಮೇಶ್ (80) ಅವರು ಇಂದು ನಿಧನರಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಉಮೇಶ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ದುರದೃಷ್ಟವಶಾತ್, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದ ವಿವರ:

ಇತ್ತೀಚೆಗೆ ಮನೆಯಲ್ಲಿ ಕಾಲು ಜಾರಿ ಬಿದ್ದಿದ್ದ ಕಾರಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆ ಸಂದರ್ಭದಲ್ಲಿ ನಡೆಸಿದ ವೈದ್ಯಕೀಯ ಪರೀಕ್ಷೆಗಳಲ್ಲಿ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಹೆಚ್ಚಿನ ಪರೀಕ್ಷೆಗಳ ನಂತರ, ವೈದ್ಯರು ಅವರಿಗೆ ಕಿಮೊಥೆರಪಿ ಮತ್ತು ಇಮ್ಯೂನೋಥೆರಪಿ ಚಿಕಿತ್ಸೆ ನೀಡುವ ಮೂಲಕ ಚೇತರಿಕೆ ಸಾಧ್ಯತೆ ಇದೆ ಎಂದು ತಿಳಿಸಿದ್ದರು.

ಆಸ್ಪತ್ರೆಯಲ್ಲಿ ಉಮೇಶ್ ಅವರಿಗೆ ಚಿಕಿತ್ಸೆ ಮುಂದುವರಿದಿದ್ದಾಗ, ಚಂದನವನದ ಹಲವು ಕಲಾವಿದರು ಅವರನ್ನು ಭೇಟಿಯಾಗಿ, ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು. ಆದರೆ ಆ ಪ್ರಾರ್ಥನೆ ಫಲಿಸಲಿಲ್ಲ.

ಎಂ.ಎಸ್. ಉಮೇಶ್ ಅವರ ನಿಧನವು ಇಡೀ ಕನ್ನಡ ಚಿತ್ರೋದ್ಯಮಕ್ಕೆ ಮತ್ತು ಅವರ ಅಭಿಮಾನಿಗಳಿಗೆ ತೀವ್ರ ನೋವನ್ನುಂಟು ಮಾಡಿದೆ. ಅವರ ಅಗಲಿಕೆಯಿಂದ ಚಿತ್ರರಂಗದಲ್ಲಿ ಸೂತಕದ ಛಾಯೆ ಆವರಿಸಿದೆ.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!