ಹಿರಿಯ ಸಾಹಿತಿ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ. ಗಟ್ಟಿ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಡಿನ ಹಿರಿಯ ಸಾಹಿತಿ, ಭಾಷಾತಜ್ಞ, ಪ್ರಾಧ್ಯಾಪಕ ಕೆ.ಟಿ. ಗಟ್ಟಿ ವಿಧಿವಶರಾಗಿದ್ದಾರೆ.

ಮೂಲತಃ ಕಾಸರಗೋಡು ಸಮೀಪದ ಕೂಡ್ಲೂವಿನವರಾದ ಕೂಡ್ಲು ತಿಮ್ಮಪ್ಪ ಗಟ್ಟಿ, ಕಳೆದ ಹಲವು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದರು. ಕರ್ನಾಟಕ ಸಾಹಿತ್ಯ ಅಕಾಡಮಿ ಗೌರವ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಗಟ್ಟಿ, ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

ಒಟ್ಟು 84 ಕಾದಂಬರಿಗಳು, 5 ಕಥಾಸಂಕಲನಗಳು, 6 ಪ್ರಬಂಧ ಸಂಕಲನಗಳು, 22 ನಾಟಕಗಳು, 14 ಬಾನುಲಿ ನಾಟಕಗಳು, 2 ಕವನ ಸಂಕಲನಗಳಲ್ಲದೆ ಆತ್ಮಕಥೆ, ವ್ಯಕ್ತಿಚಿತ್ರ, ಮಕ್ಕಳ ನಾಟಕ ಹಾಗೂ ಪ್ರವಾಸ ಕಥನಗಳನ್ನೂ ಇವರು ಸಾಹಿತ್ಯ ಕ್ಷೇತ್ರಕ್ಕೆ ಅರ್ಪಿಸಿದ್ದಾರೆ.

ಹದಿನೇಳರ ಹರೆಯದಲ್ಲಿ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ್ದ ಇವರು, 25 ವರ್ಷಗಳ ಕಾಲ ಇಂಗ್ಲಿಷ್ ಪ್ರಾಧ್ಯಾಪಕರಾಗಿ ದುಡಿದಿದ್ದರು. ಕಲಿಕೆಯಲ್ಲಿ ನಿರಂತರ ಆಸಕ್ತಿ ಹೊಂದಿದ್ದ ಕೆ.ಟಿ.ಗಟ್ಟಿ ಅವರು ಇಂಗ್ಲೆಂಡಿನ ಟ್ರಿನಿಟಿ ಮತ್ತು ಆಕ್ಸಫರ್ಡ್ ಕಾಲೇಜುಗಳಿಂದ ಇಂಗ್ಲಿಷ್ ಕಲಿಕೆಯಲ್ಲಿ ಡಿಪ್ಲೋಮ ಗಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!