ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಲಿಯಾಳಂನ ಹಿರಿಯ ನಟ ಕೆಟಿಎಸ್ ಪಡನ್ನಯಿಲ್ ಇನ್ನಿಲ್ಲ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮಲಿಯಾಳಂನ ಹಿರಿಯ ನಟ ಕೆಟಿಎಸ್ ಪಡನ್ನಯಿಲ್ (88) ಅವರು ಗುರುವಾರ ಮುಂಜಾನೆ ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮೂರು ದಿನಗಳ ಹಿಂದೆ ಕೊಚ್ಚಿಯ ಇಂದಿರಾ ಗಾಂಧಿ ಸಹಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕೆ ಹೃದಯ ಆರೈಕೆ ಘಟಕಕ್ಕೆ ಸ್ಥಳಾಂತರಿಸಲಾಗಿತ್ತು. ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ರಂಗಭೂಮಿ ಕಲಾವಿದನಾಗಿ ನಟನಾ ವೃತ್ತಿಜೀವನವನ್ನು ಪ್ರಾರಂಭಿಸಿದ ಪಡನ್ನಯಿಲ್, 1990 ರ ದಶಕದಲ್ಲಿ ಮಲಯಾಳಂ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದರು. ರಾಜಸೇನನ್ ನಿರ್ದೇಶನದ ‘ಅನಿಯನ್ ಬಾವಾ ಚೆಟ್ಟನ್ ಬಾವಾ’ ಅವರ ಚೊಚ್ಚಲ ಚಿತ್ರ.

60 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅನೇಕ ಧಾರವಾಹಿಗಳಲ್ಲಿ ನಡಿಸಿದ್ದಾರೆ. ತಮ್ಮ ಹಾಸ್ಯ ನಟನೆಯ ಮೂಲಕ ಬಹಳಷ್ಟು ಜನರ ಮನ ಗೆದ್ದಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೆಟಿಎಸ್ ಪಡನ್ನಯಿಲ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss