Wednesday, June 7, 2023

Latest Posts

ಮಲಯಾಳಂ ಹಿರಿಯ ನಟ ಮಾಮುಕೋಯಾ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲಯಾಳಂ ಚಿತ್ರರಂಗದ ಹಿರಿಯ ನಟ ಮಾಮುಕೋಯಾ ಅವರು ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

ಕೆಲ ದಿನಗಳ ಹಿಂದೆ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಅವರು ನಿಧನರಾಗಿದ್ದಾರೆ.

ಮಾಮುಕೋಯ ಅವರಿಗೆ ಹೃದಯಾಘಾತದ ಜತೆಗೆ ಮೆದುಳಿನ ರಕ್ತಸ್ರಾವ ಆಗಿರುವುದು ಸಾವಿಗೆ ಕಾರಣ ಎನ್ನಲಾಗಿದೆ. ಮಲಪ್ಪುರಂನ ಕಾಳಿಕಾವಿಲ್‌ನಲ್ಲಿ ನಡೆದ ಫುಟ್‌ಬಾಲ್ ಪಂದ್ಯಾವಳಿಯ ಉದ್ಘಾಟನೆಗೆ ತೆರಳುವ ವೇಳೆ ಅಸ್ವಸ್ಥಗೊಂಡಿದ್ದರು. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

76 ವರ್ಷದ ಮಾಮುಕೋಯಾ ಅವರ ಅಗಲಿಕೆಗೆ ಮಲಯಾಳಂ ಚಿತ್ರರಂಗ ಕಂಬನಿ ಮಿಡಿಯುತ್ತಿದೆ. ಹಲವು ವರ್ಷಗಳಿಂದ ಮಾಮುಕೋಯಾ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಮಾಮುಕೋಯಾ ಅವರನ್ನು ಕಳೆದುಕೊಂಡ ಚಿತ್ರರಂಗದ ಸೆಲೆಬ್ರಿಟಿಗಳು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!