February 5, 2026
Thursday, February 5, 2026
spot_img

ಹಿರಿಯ ಸಂಗೀತ ನಿರ್ದೇಶಕ ಹಂಸಲೇಖಗೆ ಒಲಿದ ಜೀವಮಾನ ಸಾಧನೆ ಪ್ರಶಸ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿರಿಯ ಸಂಗೀತ ನಿರ್ದೇಶಕ,ಸಾಹಿತಿ ಹಂಸಲೇಖ ಅವರಿಗೆ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಗೌರವಾನ್ವಿತ ‘ಜೀವಮಾನ ಸಾಧನೆ ಪ್ರಶಸ್ತಿ’ಯನ್ನು ಘೋಷಿಸಲಾಗಿದೆ.

ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನ ಕಾರ್ಯದರ್ಶಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ. 2025-26ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಶಸ್ತಿ ಆಯ್ಕೆ ಸಮಿತಿಯು ಫೆಬ್ರವರಿ 4, 2026 ರಂದು ನಡೆಸಿದ ಸಭೆಯಲ್ಲಿ ಹಂಸಲೇಖ ಅವರ ಹೆಸರನ್ನು ಸರ್ವಾನುಮತದಿಂದ ಶಿಫಾರಸು ಮಾಡಿದೆ.

ಹಂಸಲೇಖ ಅವರು ಕಳೆದ ನಾಲ್ಕು ದಶಕಗಳಿಂದ ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆ, ಅವರ ಸಂಗೀತ ವೈವಿಧ್ಯತೆ ಮತ್ತು ಸಾಹಿತ್ಯದ ಶ್ರೀಮಂತಿಕೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !