ಹೊಸದಿಗಂತ ಡಿಜಿಟಲ್ ಡೆಸ್ಕ್:
ನವರಂಗ್ ಥಿಯೇಟರ್ ಮಾಲೀಕರು ಹಾಗೂ ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ. ಸಿ. ಎನ್ ಮೋಹನ್ ಇಂದು ವಿಧಿವಶರಾಗಿದ್ದಾರೆ.
ಕೆ. ಸಿ. ಎನ್ ಮೋಹನ್ ಅವರಿಗೆ 65 ವರ್ಷ ವಯಸ್ಸಾಗಿತ್ತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಕೆ. ಸಿ. ಎನ್ ಮೋಹನ್ ಮೊನ್ನೆಯಷ್ಟೇ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಜುಲೈ 2ರ ಮಧ್ಯಾಹ್ನ 12.30 ಸಮಯಕ್ಕೆ ಕೊನೆಯುಸಿರೆಳೆದಿದ್ದಾರೆ.
ಕೆ.ಸಿ.ಎನ್.ಮೋಹನ್ ನಿಧನಕ್ಕೆ ಸಿನಿಮಾರಂಗ ಸಂತಾಪ ಸೂಚಿಸುತ್ತಿದೆ.