ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರ ಪ್ರಕಟಿಸಿದ ಈ ಸಾಲಿನ ಅತ್ಯನ್ನತ ನಾಗರಿಕ ಸೇವಾ ಪ್ರಶಸ್ತಿ ಪದ್ಮವಿಭೂಷಣಕ್ಕೆ ಸ್ಯಾಂಡಲ್‌ವುಡ್ ಹಿರಿಯ ನಟ ಅನಂತ್‌ನಾಗ್ ಭಾಜನರಾಗಿದ್ದಾರೆ.
ಅನಂತನಾಗ್ ಭಾರತೀಯ ಚಿತ್ರಲೋಕ ಕಂಡ ಅದ್ಭುತ ಪ್ರತಿಭೆ. ತಮ್ಮ ಸ್ವಾಬಾವಿಕ ನಟನಾಶೈಲಿಯಿಂದಲೇ ಗಮನ ಸೆಳೆಯುವ ಇವರು ಕನ್ನಡ ಮಾತ್ರವಲ್ಲದೇ ಮರಾಠಿ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಚಿತ್ರಗಳಲ್ಲೂ ನಟಿಸಿದ್ದಾರೆ.
6 ಫಿಲ್ಮ್ ಫೇರ್ ಮತ್ತು 5 ಕರ್ನಾಟಕ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕರ್ನಾಟಕ ರಾಜಕೀಯದಲ್ಲಿಯೂ ತಮ್ಮ ಛಾಪನ್ನು ಮೂಡಿಸಿರುವ ಇವರು 1994ರ ಜೆ.ಹೆಚ್.ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಸಚಿವರಾಗಿ ಕೆಲಸ ಮಾಡಿದ್ದಾರೆ.