ಸ್ಯಾಂಡಲ್‌ವುಡ್ ಹಿರಿಯ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್‌ವುಡ್‌ನ ಹಿರಿಯ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಯಜಮಾನ, ಸೂರ್ಯವಂಶ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸಿದ್ದ ಲಕ್ಷ್ಮಣ್ ಅವರಿಗೆ 74 ವರ್ಷ ವಯಸ್ಸಾಗಿತ್ತು.

ನಿನ್ನೆ ರಾತ್ರಿ ಲಕ್ಷ್ಮಣ್ ಅವರಿಗೆ ಎದೆನೋವು ಕಾಣಿಸಿದೆ. ಮುಂಜಾನೆ ಅವರನ್ನು ನಾಗರಬಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಸಿಜಿ ನಂತರ ಅವರನ್ನು ಮನೆಗೆ ಕರತರಲಾಗಿದೆ. ಮನೆಯಲ್ಲಿ ಅವರಿಗೆ ಹೃದಯಾಘಾತವಾಗಿದೆ. ಲಕ್ಷ್ಮಣ್ ಅವರ ನಿಧನಕ್ಕೆ ಸ್ಯಾಂಡಲ್‌ವುಡ್ ಸಂತಾಪ ಸೂಚಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!