ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್‌ನ ಹಿರಿಯ ನಟ ಟಿ.ತಿಮ್ಮಯ್ಯ ಅವರು ಇಂದು (ನ.16) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.
ನ.17ರ ಮಧ್ಯಾಹ್ನ 12 ಗಂಟೆಗೆ ಬನಶಂಕರಿ ಚಿತಾಗಾರದಲ್ಲಿ ಟಿ.ತಿಮ್ಮಯ್ಯ ಅವರ ಅಂತಿಮ ಸಂಸ್ಕಾರ ನೆರವೇರಲಿದೆ.
ಮೇರು ನಟರಾದ ಡಾ.ರಾಜ್‌ಕುಮಾರ್, ಡಾ. ವಿಷ್ಣುವರ್ಧನ್, ಅನಂತ್ ನಾಗ್. ಹೆಸರಾಂತ ನಿರ್ದೇಶಕರಾದ ದೊರೈ ಭಗವಾನ್, ಸುನೀಲ್ ಕುಮಾರ್ ದೇಸಾಯಿ, ಕೆ.ವಿ ಜಯರಾಮ್ ಮತ್ತು ಅನೇಕರೊಂದಿಗೆ ಅವರು ತೆರೆ ಹಂಚಿದ್ದಾರೆ .
ಚಲಿಸುವ ಮೋಡಗಳು, ಪ್ರತಿಧ್ವನಿ, ಬಂಧನ, ಬೆಂಕಿಯ ಬಲೆ, ಕಾಮನ ಬಿಲ್ಲು, ಪರಮೇಶಿ ಪ್ರೇಮ ಪ್ರಸಂಗ, ಜ್ವಾಲಾಮುಖಿ, ಭಾಗ್ಯದ ಲಕ್ಷ್ಮಿ ಬಾರಮ್ಮ, ಈ ಜೀವ ನಿನಗಾಗಿ, ಕುರುಕ್ಷೇತ್ರ, ಬೆಳದಿಂಗಳ ಬಾಲೆ ಚಿತ್ರಗಳಲ್ಲಿ ನಟಿಸಿದ್ದರು.