Sunday, August 14, 2022

Latest Posts

ಸಕಲ ಸರ್ಕಾರಿ ಗೌರವಗಳೊಂದಿಗೆ ಪಂಚಭೂತಗಳಲ್ಲಿ ಲೀನವಾದ ಗಾಯಕಿ ಲತಾ ಮಂಗೇಶ್ಕರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಮುಂಬೈನ ಶಿವಾಜಿ ಪಾರ್ಕ್ ಮೈದಾನದಲ್ಲಿ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ಈ ಮೂಲಕ ಗಾನ ಕೋಗಿಲೆ ಲತಾ ಮಂಗೇಶ್ಕರ್ ಪಂಚ ಭೂತಗಳಲ್ಲಿ ಲೀನವಾದರು.
ಪ್ರಧಾನಿ ಮೋದಿ, ಸಚಿನ್‌ ತೆಂಡೂಲ್ಕರ್‌ ದಂಪತಿ, ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ, ನಟ ಅಮಿರ್‌ ಖಾನ್ ಸೇರಿ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.
ಮುಂಬೈನ ಶಿವಾ ಪಾರ್ಕ್​​ನಲ್ಲಿ ದುಃಖದ ಛಾಯೆ ಆವರಿಸಿತ್ತು. ಎಲ್ಲರೂ ಭಾವುಕರಾಗಿದ್ದರು.ಗಾಯಕಿಯನ್ನು ಕಳೆದುಕೊಂಡ ದುಃಖ ಎಲ್ಲರಲ್ಲೂ ಮನೆ ಮಾಡಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss