ಹೊಸದಿಗಂತ ಡಿಜಿಟಲ್ ಡೆಸ್ಕ್;
ಹಿರಿಯ ರಂಗ ಕಲಾವಿದೆ, ಸಂಘಟಕಿ, ಲಲಿತಕಲೆಗಳ ಪೋಷಕರಾಗಿದ್ದ ವಿಮಲಾ ರಂಗಾಚಾರ್ (97) ನಿಧನರಾಗಿದ್ದಾರೆ.
ಭಾರತೀಯ ನಾಟ್ಯ ಸಂಘದ ಕರ್ನಾಟಕ ಘಟಕದ ಅಧ್ಯಕ್ಷರಾಗಿದ್ದ ಅವರು, ಬೆಂಗಳೂರಿನ ಎಡಿಎ ರಂಗಮಂದಿರದ ಗೌರವ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ಜೊತೆಗೆ ಶಿಕ್ಷಣ ಕ್ಷೇತ್ರ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಅವರ ಕೊಡುಗೆ ಅನನ್ಯವಾಗಿದೆ. ಬೆಂಗಳೂರಿನ ಸೇವಾ ಸದನವನ್ನು ವಿಮಲಾ ರಂಗಾಚಾರ್ ಕಟ್ಟಿ ಬೆಳೆಸಿದ್ದರು.
ವಿಮಲಾ ಅವರ ಪುತ್ರಿ ರೇವತಿ ವಿದೇಶದಲ್ಲಿದ್ದು, ಅವರು ಬೆಂಗಳೂರಿಗೆ ಬಂದ ಬಳಿಕ ಫೆ,27 ರಂದು ಅಂತ್ಯಕ್ರಿಯೆ ನಡೆಯಲಿದೆ.