ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳಿನ ಹಿರಿಯ ನಟ, ಹಿರಿಯ ರಾಜಕಾರಣಿ ಕ್ಯಾಪ್ಟನ್ ವಿಜಯ್ ಕಾಂತ್ ಇಂದು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ದೇಸೀಯಾ ಮುರ್ಪೊಕ್ಕು ದ್ರಾವಿಡಾ ಕಝಾಗಮ್ ಅಧ್ಯಕ್ಷರಾದ ವಿಜಯ್‌ಕಾಂತ್ ಕೊರೋನಾದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ದೀರ್ಘಕಾಲದ ಉಸಿರಾಟದ ತೊಂದರೆಯಿಂದ ವಿಜಯ್‌ಕಾಂತ್ ಬಳಲುತ್ತಿದ್ದರು. ಕೊರೋನಾದಿಂದಾಗಿ ಆರೋಗ್ಯ ಇನ್ನಷ್ಟು ಕ್ಷೀಣಿಸಿತ್ತು. ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಸಿನಿ ಗಣ್ಯರು ಹಾಗೂ ರಾಜಕೀಯ ಗಣ್ಯರು ವಿಜಯ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.