ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೇತೇಶ್ವರ ಪೂಜಾರ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. 2005 ರಲ್ಲಿ ಸೌರಾಷ್ಟ್ರ ಪರ ಕಣಕ್ಕಿಳಿಯುವ ಮೂಲಕ ಪ್ರಥಮ ದರ್ಜೆ ಕ್ರಿಕೆಟ್ ಕೆರಿಯರ್ ಆರಂಭಿಸಿದ್ದ ಪೂಜಾರ ಆ ಬಳಿಕ 13 ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ್ದರು. ಇದೀಗ 20 ವರ್ಷಗಳ ದೀರ್ಘಾವಧಿಯ ಕ್ರಿಕೆಟ್ ವೃತ್ತಿಜೀವನಕ್ಕೆ ಚೇತೇಶ್ವರ ಪೂಜಾರ ವಿದಾಯ ಹೇಳಿದ್ದಾರೆ.
ಚೇತೇಶ್ವರ ಪೂಜಾರ 2010 ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದರು. ಬೆಂಗಳೂರಿನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಂದ್ಯವಾಡುವ ಮೂಲಕ ಇಂಟರ್ನ್ಯಾನಷಲ್ ಕೆರಿಯರ್ ಆರಂಭಿಸಿದ್ದರು.
ಚೇತೇಶ್ವರ ಪೂಜಾರ ತಮ್ಮ ನಿವೃತ್ತಿಯ ಬಗ್ಗೆ ಸಾಮಾಜಿಕ ಮಾಧ್ಯಮದ ಮೂಲಕ ಮಾಹಿತಿ ನೀಡಿದ್ದಾರೆ. ಅವರು ತಮ್ಮ ಇನ್‌ಸ್ಟಾಗ್ರಾಮ್ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಭಾರತೀಯ ಜೆರ್ಸಿ ಧರಿಸುವುದು, ಭಾರತೀಯ ರಾಷ್ಟ್ರಗೀತೆ ಹಾಡುವುದು ಮತ್ತು ನೀವು ಮೈದಾನಕ್ಕೆ ಕಾಲಿಡುವ ಪ್ರತಿ ಬಾರಿಯೂ ನಿಮ್ಮ ಅತ್ಯುತ್ತಮ ಪ್ರದರ್ಶನ ನೀಡುವ ಉತ್ಸಾಹ, ಇವೆಲ್ಲವನ್ನೂ ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಅವೆಲ್ಲವೂ ನನಗೆ ಮುಖ್ಯವಾಗಿತ್ತು. ಆದರೆ, ಪ್ರತಿಯೊಂದು ಒಳ್ಳೆಯ ವಿಷಯವೂ ಕೊನೆಗೊಳ್ಳುತ್ತದೆ. ಅದರಂತೆ ಇದೀಗ ನಾನು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ತಿಳಿಸಿದ್ದಾರೆ.