ದಿಗಂತ ವರದಿ ಮೈಸೂರು:
ಮೈಸೂರಿನಲ್ಲಿ ಸಮತೆಂತೊ (ಸರಸ್ವತಿಪುರಂನ ಮಧ್ಯದ ತೆಂಗಿನ ತೋಪು) ರಂಗ ತಂಡ ಕಟ್ಟಿ ನಿರಂತರವಾಗಿ 50 ವರ್ಷಗಳವರೆಗೆ ನಡೆಸಿಕೊಂಡು ಬಂದ ನ.ರತ್ನ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.
ಅವರಿಗೆ 89 ವರ್ಷ ವಯಸ್ಸಾಗಿತ್ತು. ಅವರಿಗೆ ಪುತ್ರ ಅಜಿತ್, ಪುತ್ರಿ ಕವಿತಾರತ್ನ ಇದ್ದಾರೆ. ಅವರು ರಚಿಸಿದ ‘ಶಾಂತಿ ಕುಟೀರ’ ನಾಟಕ ಈಚೆಗೆ ಮೈಸೂರಿನಲ್ಲಿ ಪ್ರದರ್ಶನಗೊಂಡಿತ್ತು. ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ನಿರ್ದೇಶಕರಾಗಿದ್ದರು. ಅವರ ಅಂತ್ಯಕ್ರಿಯೆ ಮೈಸೂರಿನಲ್ಲಿ ಇಂದು ನಡೆಯಲಿದೆ.