ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾನುವಾರುಗಳಿಗೆ ಅಗತ್ಯವಾದ ಔಷಧಗಳನ್ನು ಜನೆರಿಕ್ ಮಾದರಿಯಲ್ಲಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ(ಎಲ್‌ಎಚ್‌ಡಿಸಿ) ಕಾರ್ಯಕ್ರಮದ ಅಡಿಯಲ್ಲಿ ಜನ ಔಷಧದಂತೆ ಪಶು ಔಷಧ ಯೋಜನೆ ಜಾರಿಯಾಗಲಿದೆ.
ಜಾನುವಾರುಗಳಿಗೆ ಉತ್ತಮ ಗುಣಮಟ್ಟದ ಔಷಧಗಳನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಅಂಶವಾಗಿದೆ. ಔಷಧಗಳು ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳಲ್ಲಿ ಸಿಗಲಿದೆ. ಈ ಮೂಲಕ ರೈತರು ತಮ್ಮ ಜಾನುವಾರುಗಳಿಗೆ ಅಗ್ಗದ ದರದಲ್ಲಿ ಔಷಧಗಳನ್ನು ಖರೀದಿ ಮಾಡಬಹುದು ಎಂದರು.