September 3, 2026
Thursday, September 3, 2026
spot_img

ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಬಂಧನದ ಬೆನ್ನಲ್ಲೇ IAS ಅಧಿಕಾರಿ ಗ್ಯಾನೇಂದ್ರ ಕುಮಾರ್‌ ಅಮಾನತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ಆರೋಪ ಎದುರಿಸುತ್ತಿರುವ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗ್ಯಾಂಗ್ವಾರ್ ಅವರನ್ನು ಕರ್ನಾಟಕ ಸರ್ಕಾರ ಅಮಾನತುಗೊಳಿಸಿದೆ.

ಸಿಐಡಿ ಕಸ್ಟಡಿಯಲ್ಲಿರುವ ಅಧಿಕಾರಿ

ಕ್ರಿಮಿನಲ್ ಇನ್ವೆಸ್ಟಿಗೇಷನ್ ಡಿಪಾರ್ಟ್‌ಮೆಂಟ್‌ ತನಿಖೆ ಮುಂದುವರಿಸುತ್ತಿದ್ದಂತೆ ಸಿಐಡಿ ಕಸ್ಟಡಿಯಲ್ಲಿರುವ ಐಎಎಸ್‌ ಅಧಿಕಾರಿಯನ್ನು ಅಮಾನತು ಮಾಡುವ ಆದೇಶ ನೀಡಿದೆ. ಹಗರಣದ ತನಿಖೆ ನಡೆಸುತ್ತಿರೋ CID, ಎರಡು ದಿನಗಳ ವಿಚಾರಣೆಯ ಬಳಿಕ ಆಗಸ್ಟ್ 29ರಂದು ಗ್ಯಾಂಗ್ವಾರ್ ಅವರನ್ನು ಬಂಧಿಸಿತ್ತು.

ಇದನ್ನೂ ಓದಿ:

ಗ್ಯಾಂಗ್ವಾರ್ ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ ಕರ್ನಾಟಕ ಲೋಕಸೇವಾ ಆಯೋಗದ (KPSC) ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಅವರ ವಿರುದ್ಧ ಇಬ್ಬರು ಅಭ್ಯರ್ಥಿಗಳ OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ಮಾಡಲು 1.1 ಕೋಟಿ ರೂ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರಿಗೂ ನೋಟೀಸ್

400 ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿನ ಅಕ್ರಮಗಳ ಕುರಿತು ಸರ್ಕಾರ ಜುಲೈ 28ರಂದು ಪ್ರಕರಣವನ್ನು CIDಗೆ ವರ್ಗಾಯಿಸಿತ್ತು. ಈಗ ಸದ್ಯ ಈ ಪ್ರಕರಣದ ಸಂಬಂಧ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ಗೂ ಸಿಐಡಿ ನೋಟಿಸ್‌ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !