spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, October 17, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ವಿಜಯಪುರ| ದೇವಾಸ್ಥಾನ ತೆರವು ಖಂಡಿಸಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ಕಾರ್ಯಕರ್ತರಿಂದ ಪ್ರತಿಭಟನೆ

- Advertisement -Nitte

ಹೊಸದಿಗಂತ ವರದಿ, ವಿಜಯಪುರ:

ಕಾನೂನಿನ ನೆಪ ಹೇಳಿ ರಾಜ್ಯದಲ್ಲಿ ದೇವಸ್ಥಾನಗಳನ್ನು ತೆರವುಗೊಳಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭ ಪ್ರತಿಭಟನಾಕಾರರು ಮಾತನಾಡಿ, ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಆದೇಶದ ನೆಪದಲ್ಲಿ ಹಿಂದೂ ದೇವಾಲಯಗಳನ್ನು ದ್ವಂಸಮಾಡುತ್ತಿರುವುದು ಅಸಂಖ್ಯಾತ ಹಿಂದೂ ಭಕ್ತರಿಗೆ ಆಘಾತ ಉಂಟು ಮಾಡಿದೆ. ಸರ್ಕಾರ ಕೇವಲ ಹಿಂದೂ ದೇವಾಲಯಗಳನ್ನೇ ಗುರಿಯಾಗಿಸಿಕೊಂಡಿರುವುದು ಖಂಡನೀಯ. ಭಾವನಾತ್ಮಕ ಸಂಬಂಧ ಹೊಂದಿರುವ ದೇವಾಲಯಗಳನ್ನು ದ್ವಂಸ ಮಾಡಿರುವುದು ಹಿಂದೂಗಳ ಭಾವನೆಗೆ ಧಕ್ಕೆ ಮಾಡಿದಂತಾಗಿದೆ ಎಂದು ದೂರಿದರು.
ಕೂಡಲೇ ದ್ವಂಸಗೊಳಿಸಿರುವ ದೇವಸ್ಥಾನಗಳನ್ನು ಪುನರ್ ನಿರ್ಮಿಸಿ, ರಾಜ್ಯದ ಎಲ್ಲ ದೇವಾಲಯಗಳನ್ನು ಸಕ್ರಮಗೊಳಿಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ವಿಶ್ವ ಹಿಂದೂ ಪರಿಷದ್ ಬಜರಂಗದಳದ ಉತ್ತರ ಪ್ರಾಂತ ಪ್ರಚಾರ ಪ್ರಮುಖ ಸುನೀಲ ಭೈರವಾಡಗಿ, ಸಂತೋಷ ನಾಯಕ, ಸುನೀಲ ಜಮಖಂಡಿ, ಈರಣ್ಣ ಹಳ್ಳಿ, ಸಿದ್ದಣ್ಣ ಹೂಗಾರ, ಶಿವಾನಂದ ನಾಗರಾಳ ಇದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss