Friday, June 2, 2023

Latest Posts

ಬೇಲೂರಿನ ಚನ್ನಕೇಶವ ರಥೋತ್ಸವದಲ್ಲಿ ಕುರಾನ್ ಪಠಣ ಮಾಡದಂತೆ ಆಗ್ರಹಿಸಿ ಪ್ರತಿಭಟನೆ : ಸ್ಥಳದಲ್ಲಿ ಬಿಗುವಿನ ವಾತಾವರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : ‌

ಬೇಲೂರಿನ ಚನ್ನಕೇಶವ ರಥೋತ್ಸವದ ವೇಳೆ ಕುರಾನ್ ಪಠಣ ಮಾಡದಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕಾರ್ಯಕರ್ತರು ಇಂದು ಪ್ರತಿಭಟನೆ ಮಾಡಿದರು.

ಹಾಸನ ಜಿಲ್ಲೆಯ ಬೇಲೂರಿನಲ್ಲಿ ಏಪ್ರಿಲ್ 4 ರಂದು ಚನ್ನಕೇಶವ ರಥೋತ್ಸವ ನಡೆಯಲಿದೆ. ಈ ವೇಳೆ ಕುರಾನ್ ಪಠಣ ಮಾಡಬಾರದು ಮತ್ತು ಅದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ವಿಹೆಚ್ ಪಿ, ಬಜರಂಗ ದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನಡೆಯುವ ವೇಳೆ ಯುವಕನೊಬ್ಬ ಕುರಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ಇದರಿಂದಾಗಿ ವಿಹೆಚ್ ಪಿ ಬಜರಂಗ ದಳದ ಕಾರ್ಯಕರ್ತರು ಮತ್ತು ಮುಸ್ಲಿಂ ಯುವಕನ ನಡುವೆ ವಾಗ್ವಾದ ನಡೆದಿದೆ. ತಕ್ಷಣ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿಚಾರ್ಜ್ ಮಾಡಿದ್ದಾರೆ.

ಬಳಿಕ ಘೋಷಣೆ ಕೂಗಿದ ಯುವಕನನ್ನ ಪೊಲೀಸರು ವಶಕ್ಕೆ ಪಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!