ಹೊಸದಿಗಂತ ವರದಿ, ಮಡಿಕೇರಿ:
ನಗರದ ವಿಶ್ವ ಹಿಂದೂ ಪರಿಷದ್ ಸಂಚಾಲಿತ ಅಶ್ವಿನಿ ಆಸ್ಪತ್ರೆಗೆ ವಿಶ್ವ ಹಿಂದೂ ಪರಿಷತ್’ನ ರಾಷ್ಟ್ರೀಯ ಕಾರ್ಯಾಧ್ಯಕ್ಷ ಅಲೋಕ್ ಕುಮಾರ್ ಅವರು ಇಂದು ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ ಅವರು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಮತ್ತು ಅಭಿವೃದ್ಧಿಪಡಿಸಲು ಅಗತ್ಯವಿರುವ ಎಲ್ಲಾ ಸಹಕಾರ ನೀಡುವುದಾಗಿ ತಿಳಿಸಿದರು.
ಆಸ್ಪತ್ರೆಯ ಟ್ರಸ್ಟಿಗಳು ಹಾಗೂ ವಿಹೆಚ್‍ಪಿ ಪ್ರಮುಖರೊಂದಿಗೆ ಸಮಾಲೋಚನೆ ನಡೆಸಿದ ಸಲಹೆ, ಸೂಚನೆಗಳನ್ನು ನೀಡಿದ ಅವರು, ಸೇವಾ ಕಾರ್ಯದಲ್ಲಿ ಎಲ್ಲರೂ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ವಿಹೆಚ್‍ಪಿ ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ, ಕಾರ್ಯಾಧ್ಯಕ್ಷ ಸುರೇಶ್ ಮುತ್ತಪ್ಪ, ಕಾರ್ಯದರ್ಶಿ ಪುದಿಯೊಕ್ಕಡ ರಮೇಶ್, ಅಶ್ವಿನಿ ಆಸ್ಪತ್ರೆಯ ಟ್ರಸ್ಟಿಗಳಾದ ಎಂ.ಸಿ.ಗೋಖಲೆ, ರಾಜಪ್ಪ, ಟಿ.ಆರ್.ಶೆಣೈ, ಎಸ್.ಕೆ.ಸತೀಶ್, ಡಾ.ಪೊನ್ನಪ್ಪ ಮತ್ತಿತರರು ಉಪಸ್ಥಿತರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ