ಹೊಸ ದಿಗಂತ ವರದಿ, ಅಂಕೋಲಾ:
ತಾಲೂಕಿನ ಅಚವೆ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಭೂತಿ ಜಲಪಾತದ ನೀರಿನಲ್ಲಿ ಮುಳುಗಿ ವ್ಯಕ್ತಿಯೋರ್ವ ಮೃತ ಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ.
ಆಂಧ್ರಪ್ರದೇಶದ ಖಾಸಗಿ ಕಂಪನಿ ಉದ್ಯೋಗಿ ಶ್ಯಾಮ (25) ಎಂಬಾತ ಮೃತ ವ್ಯಕ್ತಿಯಾಗಿದ್ದು ಗೆಳೆಯರೊಂದಿಗೆ ವಿಭೂತಿ ಪಾಲ್ಸ್ ವೀಕ್ಷಣೆಗೆ ಬಂದಿದ್ದ ಈತ ಜಲಪಾತದ ನೀರಿಗೆ ಇಳಿದ ಸಂದರ್ಭದಲ್ಲಿ ನೀರಿನ ರಭಸಕ್ಕೆ ಕಾಲು ಜಾರಿ ನೀರಿನಲ್ಲಿ ಮುಳುಗಿರುವುದಾಗಿ ತಿಳಿದು ಬಂದಿದೆ.
ವರ್ಷಾಂತ್ಯದ ರಜೆ ಕಳೆಯಲು ಆಂಧ್ರಪ್ರದೇಶ ಸುಮಾರು 10 ಜನರ ತಂಡ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಆಗಮಿಸಿದ್ದು
ಅಚವೆಯ ಪ್ರಸಿದ್ಧ ವಿಭೂತಿ ಪಾಲ್ಸ್ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.
ಜಲಪಾತದ ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡ ವ್ಯಕ್ತಿಯನ್ನು ಜೀವ ರಕ್ಷಕ ಸಿಬ್ಬಂದಿ ನೀರಿನಿಂದ ಮೇಲೆತ್ತಿ ಆಂಬ್ಯುಲೆನ್ಸ್ ಮೂಲಕ ಅಂಕೋಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು , ಪರೀಕ್ಷೆ ನಡೆಸಿದ ವೈದ್ಯರು ಆತ ಮೃತ ಪಟ್ಟಿರುವ ಕುರಿತು ಮಾಹಿತಿ ನೀಡಿರುವುದಾಗಿ ತಿಳಿದು ಬಂದಿದೆ.