March 25, 2026
Wednesday, March 25, 2026
spot_img

ಬೆಳಗಾವಿಗೆ ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್: ಆತ್ಮೀಯವಾಗಿ ಬರಮಾಡಿಕೊಂಡ ಸತೀಶ್ ಜಾರಕಿಹೊಳಿ

ಹೊಸದಿಗಂತ ವರದಿ ಬೆಳಗಾವಿ:

ಚಿಕ್ಕೋಡಿ ತಾಲೂಕಿನ ಸುಕ್ಷೇತ್ರ ಯಡೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದ ರಾಜಗೋಪುರ ಹಾಗೂ ವಿವಿಧ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಕಳಸಾರೋಹಣ, ಮಹಾಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರನ್ನು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಹೂಗುಚ್ಚ ನೀಡುವ ಮೂಲಕ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮೇಯರ್ ಮಂಗೇಶ್ ಪವಾರ್, ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ., ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೇರಿದಂತೆ ಇತರರು ಇದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !