July 17, 2026
Friday, July 17, 2026
spot_img

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರುಶನ ಪಡೆದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಬೆಳಗ್ಗೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿ ದೇವರ ದರುಶನ ಪಡೆದರು.

ಅನ್ನಪೂರ್ಣ ಛತ್ರಕ್ಕೆ ಭೇಟಿ

ಸಾಂಪ್ರದಾಯಿಕ ಉಡುಪಿನಲ್ಲಿ ದೇವಾಲಯಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳು ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ಅವರು ಅನ್ನಪೂರ್ಣ ಛತ್ರಕ್ಕೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಹಾಗೂ ಸೇವಾ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಉಪರಾಷ್ಟ್ರಪತಿಗಳು ಕೆಲಕಾಲ ಮಾತುಕತೆ ನಡೆಸಿದರು.

ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ದ.ಕ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ, ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಸಹಿತ ಗಣ್ಯರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !