Tuesday, September 9, 2025

ಇಂದು ಉಪರಾಷ್ಟ್ರಪತಿ ಚುನಾವಣೆ : ಸಂಜೆ ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಆಡಳಿತ-ವಿರೋಧ ಪಕ್ಷದ ನಡುವೆ ಪ್ರತಿಷ್ಠೆಯ ಕಣವಾಗಿದ್ದು, ಎನ್‌ಡಿಎ ಅಭ್ಯರ್ಥಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲರಾಗಿರುವ ಸಿ.ಪಿ.ರಾಧಾಕೃಷ್ಣನ್, ಇಂಡಿ ಅಭ್ಯರ್ಥಿ ಮತ್ತು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್ ರೆಡ್ಡಿ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ.

ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಲಿದ್ದಾರೆ. ಸಂಜೆ ನಂತರ ಫಲಿತಾಂಶ ಪ್ರಕಟಗೊಳ್ಳಲಿದೆ. ಬಹುತೇಕ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರ ಗೆಲುವು ಸ್ಪಷ್ಟವಾಗಿದೆ.

ಇದನ್ನೂ ಓದಿ