ಉಪರಾಷ್ಟ್ರಪತಿ ಜಗದೀಪ್ ಧನಕರ್​ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಇಂದು ಮುಂಜಾನೆ ಎದೆ ನೋವು ಮತ್ತು ಅಸ್ವಸ್ಥತೆಯಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಬೆಳಗಿನ ಜಾವ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆತರಲಾಯಿತು ಮತ್ತು ಏಮ್ಸ್‌ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ರಾಜೀವ್ ನಾರಂಗ್ ಅವರ ಆರೈಕೆಯಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ (CCU) ಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜಗದೀಪ್ ಧನಕರ್ ಅವರ ಆರೋಗ್ಯ ಸ್ಥಿರವಾಗಿದ್ದು, ಅವರ ಮೇಲೆ ನಿಗಾ ಇಡಲಾಗಿದೆ ಎಂದು ಮೂಲಗಳು ವರದಿ ಮಾಡಿದ್ದು, ವೈದ್ಯರ ತಂಡವು ಅವರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!