ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನಾರೋಗ್ಯದ ಕಾರಣದಿಂದ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಚೇತರಿಕೆ ಕಂಡು ಬಂದಿದ್ದು, ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಹೃದಯ ಸಂಬಂಧಿತ ಕಾಯಿಲೆಗಳಿಂದಾಗಿ ಅವರನ್ನು ಮಾರ್ಚ್ 9 ರಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗೆ ದಾಖಲಿಸಲಾಗಿತ್ತು.
ವೈದ್ಯಕೀಯ ತಂಡದಿಂದ ಅಗತ್ಯ ಆರೈಕೆ ಪಡೆದ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಹೀಗಾಗಿ ಅವರನ್ನು ಬಿಡುಗಡೆ ಮಾಡಲಾಯಿತು ಎಂದು ಏಮ್ಸ್-ದೆಹಲಿ ತಿಳಿಸಿದೆ.