January18, 2026
Sunday, January 18, 2026
spot_img

ಉಪರಾಷ್ಟ್ರಪತಿ ಚುನಾವಣೆ: ಮೋದಿ-ದೇವೇಗೌಡ ಸೇರಿ ಹಲವು ಗಣ್ಯರಿಂದ ಮತದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ದಿಢೀರ್‌ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಹುದ್ದೆಗೆ ಮಂಗಳವಾರ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್‌.ಡಿ. ದೇವೇಗೌಡ ಸೇರಿದಂತೆ ಹಲವು ನಾಯಕರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.

ಮೊದಲ ಮತದಾರರಲ್ಲಿ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌, ಅರ್ಜುನ್‌ ರಾಮ್‌ ಮೇಘವಾಲ್‌ ಮತ್ತು ಕಿರಣ್‌ ರಿಜಿಜು ಸೇರಿದ್ದಾರೆ. ರಾಜ್ಯಸಭೆಯ ಉಪಸಭಾಪತಿ ಹರಿವಂಶ್‌ ಬಿಜೆಪಿ ಸಂಸದೆ ಕಂಗನಾ ರಣಾವತ್‌ ಮತ್ತು ಎಸ್‌‍ಪಿ ನಾಯಕ ರಾಮ್‌ ಗೋಪಾಲ್‌ ಯಾದವ್‌ ಸೇರಿದಂತೆ ಇತರರು ಮತ ಚಲಾಯಿಸಿದರು.

ಉಪರಾಷ್ಟ್ರಪತಿ ಚುನಾವಣೆಗಾಗಿ ಇಂದು (ಸೆ.9-ಮಂಗಳವಾರ) ಬೆಳಗ್ಗೆ 10 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ.

ಸಂಸತ್ತಿನ ಉಭಯ ಸದನಗಳ ಸದಸ್ಯರು ಇಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸಂಸತ್‌ ಭವನದಲ್ಲಿ ಮತ ಚಲಾಯಿಸಲಿದ್ದಾರೆ. ಮತ ಎಣಿಕೆ ಸಂಜೆ 6 ಗಂಟೆಗೆ ಆರಂಭವಾಗಲಿದ್ದು, ಫಲಿತಾಂಶಗಳನ್ನು ಸಂಜೆ ತಡವಾಗಿ ಪ್ರಕಟಿಸಲಾಗುವುದು.

ಈ ಚುನಾವಣೆಯಲ್ಲಿ ಸಂಸತ್ತಿಗೆ ಆಯ್ಕೆಗೊಂಡ ಮತ್ತು ನಾಮನಿರ್ದೇಶನಗೊಂಡ ಎಲ್ಲಾ ಸಂಸದರು ಮತ ಚಲಾಯಿಸಲಿದ್ದಾರೆ. ಸಾಯಂಕಾಲ 5 ಗಂಟೆ ಬಳಿಕ ಚುನಾವಣಾ ಫಲಿತಾಂಶ ಘೋಷಣೆಯಾಗಲಿದೆ.

Must Read

error: Content is protected !!