ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಮಹಾಶಿವಯೋಗಿಗಳವರ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವದ ಅಂಗವಾಗಿ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಠಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಜನವರಿ 21ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾರತದ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರು ಭಾಗವಹಿಸಲಿದ್ದಾರೆ ಎಂದು ಅಧಿಕೃತವಾಗಿ ತಿಳಿಸಿದರು.
ಉಪರಾಷ್ಟ್ರಪತಿಗಳ ಭೇಟಿಯ ಕುರಿತು ಮಾಹಿತಿ ಹಂಚಿಕೊಂಡ ಸೋಮಣ್ಣ, “ಸಿ.ಪಿ.ರಾಧಾಕೃಷ್ಣನ್ ಅವರು ರಾಜಕೀಯ ಮತ್ತು ಆಡಳಿತದಲ್ಲಿ ಅಪಾರ ಅನುಭವ ಹೊಂದಿರುವ ದೂರದೃಷ್ಟಿಯ ವ್ಯಕ್ತಿತ್ವದವರು. ಶ್ರೀಮಠದ ಘನತೆ ಮತ್ತು ಇತಿಹಾಸವನ್ನು ಅವರಿಗೆ ಪರಿಚಯಿಸುವಲ್ಲಿ ಯಾವುದೇ ಲೋಪವಾಗಬಾರದು ಎಂಬ ದೃಷ್ಟಿಯಿಂದ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ” ಎಂದರು.


