ಹೊಸದಿಗಂತ ಡಿಜಿಟಲ್ ಡೆಸ್ಕ್:
ಪದ್ಮನಾಭನಗರದ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ ಮಾಡಿದ್ದಾರೆ.
ಕಾರ್ಯಕ್ರಮದ ನಿಮಿತ್ತ ಉಪರಾಷ್ಟ್ರಪತಿ ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಪದ್ಮನಾನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾಜಿ ಪ್ರಧಾನಿಯನ್ನು ಭೇಟಿ ಮಾಡಿದರು.
ಮಾಜಿ ಪ್ರಧಾನಿ ದೇವೇಗೌಡರು ಉಪರಾಷ್ಟ್ರಪತಿ ಜಗದೀಪ್ ಮತ್ತು ಅವರ ಪತ್ನಿ ಸುದೇಶ್ ಧನಕರ್ ಅವರಿಗೆ ಹೂಗುಚ್ಛ ನೀಡಿ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಉಪಸ್ಥಿತರಿದ್ದರು.