ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜ್ವಲ್ ರೇವಣ್ಣ, ವಿಚಾರಣೆಗೆ ಹಾಜರಾಗುವೆ ಎಂದು ವಿಡಿಯೊ ಮಾಡಿ ಹರಿಬಿಟ್ಟ ಬೆನ್ನಲ್ಲೇ ಅವರ ತಾಯಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಲೈಂಗಿಕ ದೌರ್ಜನ್ಯ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟ್‌ಗೆ ಅವರು ಅರ್ಜಿ ಸಲ್ಲಿಸಿದ್ದಾರೆ.
ಕೆ.ಆರ್.ನಗರದ ಸಂತ್ರಸ್ತೆ ಕಿಡ್ನ್ಯಾಪ್ ಕೇಸ್‌ನಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಭವಾನಿ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಲೈಂಗಿಕ ದೌರ್ಜನ್ಯ ಮತ್ತು ಕಿಡ್ನ್ಯಾಪ್ ಕೇಸ್‌ನಲ್ಲಿ ಈಗಾಗಲೇ ಮಾಜಿ ಸಚಿವ ರೇವಣ್ಣ ಅವರಿಗೆ ಬೇಲ್ ಸಿಕ್ಕಿದೆ. ಈ ನಡುವೆ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆ.ಆರ್. ನಗರದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಕುಮ್ಮಕ್ಕು ಕೊಟ್ಟ ಆರೋಪವನ್ನು ಭವಾನಿ ರೇವಣ್ಣ ಹೊತ್ತಿದ್ದಾರೆ. ಮೊದಲ ನೋಟಿಸ್‌ಗೆ ಉತ್ತರಿಸದ ಹಿನ್ನೆಲೆಯಲ್ಲಿ ಇತ್ತೀಚೆಗೆ ಎರಡನೇ ನೋಟಿಸ್ ಜಾರಿ ಮಾಡಲಾಗಿತ್ತು. ಆದರೆ, ಭವಾನಿ ಅವರು ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದರು. ಇದೀಗ ಅರ್ಜಿ ಸಲ್ಲಿಸಿದ್ದಾರೆ.