ಆಫ್ರಿಕಾ ವಿರುದ್ಧ ಗೆಲುವು: ಟೀಮ್ ಇಂಡಿಯಾಕ್ಕೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ವಿಶ್ವಕಪ್‌ 2023 ಟೂರ್ನಿಯ (World Cup 2023) ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ (India vs South Africa) ಅಮೋಘ ಜಯ ದಾಖಲಿಸಿದೆ. ಗೆಲುವಿಗೆ ಪ್ರಧಾನಿ ಮೋದಿ (Narendra Modi) ಟ್ವೀಟ್‌ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತದ ಗೆಲುವಿಗೆ ಸಂತಸ ವ್ಯಕ್ತಪಡಿಸಿರುವ ಮೋದಿ, ನಮ್ಮ ಕ್ರಿಕೆಟ್ ತಂಡ ಮತ್ತೊಮ್ಮೆ ವಿಜಯಶಾಲಿಯಾಗಿದೆ! ದಕ್ಷಿಣ ಆಫ್ರಿಕಾ ವಿರುದ್ಧ ಅಮೋಘ ಪ್ರದರ್ಶನ ನೀಡಿದ ತಂಡಕ್ಕೆ ಅಭಿನಂದನೆಗಳು. ಉತ್ತಮ ತಂಡದ ಕೆಲಸ. ಇಂದು ಸುಂದರವಾದ ಇನ್ನಿಂಗ್ಸ್ ಆಡಿದ ವಿರಾಟ್ ಕೊಹ್ಲಿಗೆ (Virat Kohli) ತಂಡವು ಹುಟ್ಟುಹಬ್ಬದ ಉಡುಗೊರೆಯನ್ನು ನೀಡಿದೆ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ತಮ್ಮ ಹುಟ್ಟುಹಬ್ಬದ ದಿನದಂದೇ ಕಿಂಗ್‌ ಕೊಹ್ಲಿ ಅಭಿಮಾನಿಗಳಿಗೆ ಶತಕದ ಸಿಹಿ ಕೊಟ್ಟರು. ಜೊತೆಗೆ ಏಕದಿನ ವಿಶ್ವಕಪ್‌ನಲ್ಲಿ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರ 49 ಶತಕಗಳ ದಾಖಲೆಯನ್ನು ಸರಿಗಟ್ಟಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!