Monday, January 30, 2023

Latest Posts

ಕಾಂಗ್ರೆಸ್ ತೊರೆದ ಹಾರ್ದಿಕ್ ಪಟೇಲ್‍ಗೆ ಗೆಲುವಿನ ಸಂಭ್ರಮ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಹಾರ್ದಿಕ್ ಪಟೇಲ್‍ಗೆ ಗುಜರಾತಿನ ಜನತೆ ಆಶೀರ್ವಾದ ಮಾಡಿದ್ದೂ, ಚುನಾವಣೆಯಲ್ಲಿ ಭರ್ಜರಿ ಜಯ ದೊರೆತಿದೆ.
ವಿರಾಮಗಾಮ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಹಾರ್ದಿಕ್ ಪಟೇಲ್ , ಕಾಂಗ್ರೆಸ್ ಲಖಾಭಾಯ್ ಭಾರವಾಡ್ ಅವರನ್ನು 50,000ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದರು.
2015ರಲ್ಲಿ ಗುಜರಾತ್‍ನಲ್ಲಿ ಪಾಟೀದಾರ್ ಸಮುದಾಯದ ಮೀಸಲಾತಿ ಪರ ನಡೆದಿದ್ದ ಪ್ರತಿಭಟನೆಯ ನೇತೃತ್ವ ವಹಿಸುವ ಮೂಲಕ ದೊಡ್ಡ ಸಂಚಲನ ಉಂಟುಮಾಡಿದ್ದ ಹಾರ್ದಿಕ್ ಪಟೇಲ್, ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಅವರನ್ನು ಗುಜರಾತ್ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ಬಳಿಕ ಅವರನ್ನು ಕಾಂಗ್ರೆಸ್ ನಲ್ಲಿ ಮೂಲೆಗುಂಪು ಮಾಡಲಾಗಿತ್ತು. ಹೀಗಾಗಿ ಜೂನ್ ತಿಂಗಳಲ್ಲಿ ಅವರು ಬಿಜೆಪಿ ಸೇರ್ಪಡೆಯಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!