ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಭಾರತೀಯ ಜನತಾ ಪಕ್ಷ 27 ವರ್ಷಗಳ ನಂತರ ಪುನಃ ಅಧಿಕಾರಕ್ಕೆ ಬಂದಿದೆ. ಇದೇ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ ಜೋರಾಗಿದೆ.
ಗೆಲುವಿನ ರೂವಾರಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಂಭ್ರಮದಲ್ಲಿ ಭಾಗಿಯಾಗಲು ಕಚೇರಿಗೆ ಆಗಮಿಸಿದರು. ನೆರೆದಿದ್ದ ಕಾರ್ಯಕರ್ತರು ಮತ್ತು ಬೆಂಬಲಿಗರು ಮೋದಿ ಮೋದಿ ಎಂದು ಘೋಷಣೆ ಕೂಗುತ್ತ ಅದ್ದೂರಿಯಾಗಿ ಸ್ವಾಗತಿಸಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪಕ್ಷದ ಶಾಲು ಹೊದಿಸಿ, ಹೂಗುಚ್ಛ ನೀಡಿ ಪ್ರಧಾನಿ ಮೋದಿಯವರನ್ನು ಬರಮಾಡಿಕೊಂಡರು.