ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಗೆಲುವು: ಭವಿಷ್ಯ ನುಡಿದ ಟುಡೇಸ್‌ ಚಾಣಕ್ಯ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ದೆಹಲಿ ಚುನಾವಣೆಯಲ್ಲಿ ಬಿಜೆಪಿ (BJP) 50+ ಸ್ಥಾನ ಗೆಲ್ಲಬಹುದು ಎಂದು ಟುಡೇಸ್‌ ಚಾಣಕ್ಯ (Today’s Chanakya) ಭವಿಷ್ಯ ನುಡಿದಿದೆ.

ಬುಧವಾರ ತನ್ನ ಚುನಾವಣೋತ್ತರ ಸಮೀಕ್ಷೆಯನ್ನು ಪ್ರಕಟಿಸದ ಟುಡೇಸ್‌ ಚಾಣಕ್ಯ ಇಂದು ಸಂಜೆ 7 ಗಂಟೆಗೆ ದತ್ತಾಂಶವನ್ನು ಬಿಡುಗಡೆ ಮಾಡಿತು.

ಬಿಜೆಪಿ ಮೈತ್ರಿಕೂಟ 51 ± 6, ಆಪ್‌ 19 ± 6, ಇತರರು 0 ± 3 ಸ್ಥಾನ ಗೆಲ್ಲಬಹುದು ಎಂದು ಹೇಳಿದೆ. ಬಿಜೆಪಿ 49%, ಆಪ್‌ 41%, ಇತರರು 10% ಮತ ಪಡೆಯಬಹುದು ಎಂದು ತಿಳಿಸಿದೆ.

ದೆಹಲಿ ಚುನಾವಣೆಗೆ ಸಂಬಂಧಿಸಿದಂತೆ ಒಟ್ಟು ಇಲ್ಲಿಯವರೆಗೆ ಪ್ರಕಟವಾದ 12 ಸಮೀಕ್ಷೆಗಳಲ್ಲಿ 10 ಸಮೀಕ್ಷೆಗಳು ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರೆ 2 ಸಮೀಕ್ಷೆಗಳು ಆಪ್‌ ಜಯಗಳಿಸಲಿದೆ ಎಂದು ತಿಳಿಸಿದೆ.

ಒಟ್ಟು 70 ಕ್ಷೇತ್ರಗಳಿಗೆ 699 ಅಭ್ಯರ್ಥಿಗಳು ಕಣದಲ್ಲಿದ್ದು ಫೆ.8 ರಂದು ದೆಹಲಿ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಸರಳ ಬಹುಮತಕ್ಕೆ 36 ಸ್ಥಾನಗಳ ಅಗತ್ಯವಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!