ತ್ರಿಪುರಾ, ನಾಗಾಲ್ಯಾಂಡ್ ನಲ್ಲಿ ಬಿಜೆಪಿಗೆ ಗೆಲುವು: ಇಂದು ಸಂಜೆ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ತ್ರಿಪುರಾ ಮತ್ತು ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಎರಡು ರಾಜ್ಯದಲ್ಲಿ ಅಭೂತಪೂರ್ವ ಗೆಲುವು ದಾಖಲಿಸಿರುವ ಬಿಜೆಪಿ ಇದೀಗ ಸಂಭ್ರಮಾಚರಣೆಯಲ್ಲಿ ತೊಡಗಿದೆ.

ಪ್ರಧಾನಿ ನರೇಂದ್ರ ಮೋದಿ, ಇಂದು ಸಂಜೆ 7 ಗಂಟೆಗೆ ಬಿಜೆಪಿ ಪ್ರಧಾನ ಕಚೇರಿಕೆಗೆ ಭೇಟಿ ನೀಡಲಿದ್ದು, ಭಾಷಣ ಮಾಡಲಿದ್ದಾರೆ.

ಈ ವೇಳೆ ಗೆಲುವಿಗೆ ಕಾರಣರಾದ ನಾಗಾಲ್ಯಾಂಡ್, ತ್ರಿಪುರಾ ಹಾಗೂ ಮೆಘಾಲಯದ ಜನತೆಗೆ ಧನ್ಯವಾದ ಹೇಳಲಿದ್ದಾರೆ. ಇದರ ಜೊತೆಗೆ ಸಂಸದರನ್ನುದ್ದೇಶಿ ಭಾಷಣ ಮಾಡಲಿದ್ದಾರೆ.

ಸಂಜೆ 7 ಗಂಟೆಗೆ ದೆಹಲಿ ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ, ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ಕಾರ್ಯಕರ್ತರು, ಸಂಸದರು,ಶಾಸಕರನ್ನುದ್ದೇಶಿ ಮೋದಿ ಮಾತನಾಡಲಿದ್ದಾರೆ.

ತ್ರಿಪುರಾದಲ್ಲಿ ಅಧಿಕಾರ ಹಿಡಿಯಲು ಬೇಕಾದ ಮ್ಯಾಜಿಕ್ ನಂಬರ್ 31. ಸದ್ಯ ಬಿಜೆಪಿ ಮ್ಯಾಜಿಕ್ ನಂಬರ್ ದಾಟಿದೆ. ಬಿಜೆಪಿ ಹಾಗೂ ಮೈತ್ರಿ ಪಕ್ಷಗಳು ಈಗಾಗಲೇ 33 ಸ್ಥಾನ ಗೆದ್ದುಕೊಂಡಿದೆ.

ಇತ್ತ ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಭರ್ಜರಿ ಗೆಲುವು ಕಂಡಿದೆ. ಬಿಜೆಪಿ ಹಾಗೂ ಎನ್‌ಡಿಪಿಪಿ ಮೈತ್ರಿ ಪಕ್ಷ ಒಟ್ಟು 37 ಸ್ಥಾನಗಳನ್ನು ಈಗಾಗಲೇ ಗೆದ್ದುಕೊಂಡಿದೆ. ಅಂತಿಮ ವರದಿ ಇನ್ನಷ್ಟೇ ಬರಬೇಕಿದೆ ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಬಲಿಷ್ಠ ಪಕ್ಷವಾಗಿ ಹೊರಹೊಮ್ಮಿದೆ.

ಮೆಘಾಲಯದಲ್ಲಿ ಬಿಜೆಪಿ 5ನೇ ಸ್ಥಾನ ಸಂಪಾದಿಸಿದೆ. ಎನ್‌ಪಿಪಿ ಪಕ್ಷ 25 ಸ್ಥಾನಗಳನ್ನು ಗೆದ್ದುಕೊಂಡಿದೆ. ಮೆಘಾಲಯದಲ್ಲಿ ಇದುವರೆಗೆ ಯಾರಿಗೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. ಎನ್‌ಪಿಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ಸಿಕ್ಕಿಲ್ಲ. ಇನ್ನು ಯುಡಿಪಿ 11 ಸ್ಥಾನಗಳನ್ನ ಗೆದ್ದುಕೊಂಡಿದೆ. ಇಲ್ಲಿ ಕಾಂಗ್ರೆಸ್ 5 ಸ್ಥಾನ ಗೆದ್ದುಕೊಂಡಿದೆ. ಕಾಂಗ್ರೆಸ್ ನಂತರದ ಸ್ಥಾನ ಬಿಜೆಪಿ ಪಡೆದುಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!