BIG NEWS | ಕೇಂದ್ರ ಸರಕಾರಕ್ಕೆ ಗೆಲುವು: ರಾಜ್ಯಸಭೆಯಲ್ಲೂ ದೆಹಲಿ ಸೇವಾ ಮಸೂದೆ ಅಂಗೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯಸಭೆಯಲ್ಲಿ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಮಸೂದೆ, 2023 ಅನ್ನು ಮಂಡಿಸಿದರು. ರಾಜ್ಯಸಭೆಯಲ್ಲಿ ಅನುಮೋದನೆ ದೊರೆಯಿತು. ಈ ಮೂಲಕ ಸಂಸತ್ತಿನ ಮೇಲ್ಮನೆ ಅಂದರೆ ರಾಜ್ಯಸಭೆಯಲ್ಲಿ ಮೋದಿ ಸರಕಾರಕ್ಕೆ ಭರ್ಜರಿ ಜಯ ಸಿಕ್ಕಂತಾಗಿದೆ .

ಮಸೂದೆಯ ಪರವಾಗಿ 131 ಮತಗಳು ಹಾಗೂ ವಿರುದ್ಧವಾಗಿ 102 ಮತಗಳು ಚಲಾವಣೆಯಾದವು.

ದೆಹಲಿ ರಾಷ್ಟ್ರೀಯ ರಾಜಧಾನಿ ಪ್ರದೇಶದ ಆಡಳಿತ (ತಿದ್ದುಪಡಿ) ಮಸೂದೆ 2023 ಅನ್ನು ಈಗಾಗಲೇ ಲೋಕಸಭೆಯು ಅಂಗೀಕರಿಸಿದೆ. ರಾಷ್ಟ್ರಪತಿಗಳ ಒಪ್ಪಿಗೆ ಬಳಿಕ ಅದು ಈಗ ಕಾನೂನಿನ ರೂಪ ಪಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!