ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವಿನ ಮೂಲಕ ಸರ್ಕಾರ ರಚಿಸಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ವಿಪಕ್ಷಗಳ ಒಕ್ಕೂಟ 2024ರ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದೆ.
ಇಷ್ಟು ದಿನ ಕಾಂಗ್ರೆಸ್ ಹೊರಗಿಟ್ಟು ಮೈತ್ರಿ ಮಾಡಿಕೊಳ್ಳಲು ಮುಂದಾಗಿದ್ದ ಹಲವು ಪಕ್ಷಗಳು ಇದೀಗ ಕಾಂಗ್ರೆಸ್ ನೇತೃತ್ವದಲ್ಲಿ ಮುನ್ನಡೆಯುವ ಸೂಚನೆ ನೀಡಿದೆ. ಬಿಹಾರ ಸಿಎಂ ನಿತೀಶ್ ಕುಮಾರ್ ಇದೀಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರ 10 ಮಾರ್ಗ್ನಲ್ಲಿರುವ ಮನೆಯಲ್ಲಿ ಈ ಮಹತ್ವದ ಮಾತುಕತೆ ನಡೆಸಿದೆ. ಮುಂದಿನ ಲೋಕಸಭಾ ಚುನಾವಣೆಗೆ ಒಗ್ಗಟ್ಟಾಗಿ ಬಿಜೆಪಿ ವಿರುದ್ಧ ಹೋರಾಡಲು ಚರ್ಚೆ ನಡೆಯುತ್ತಿದೆ.
ಕೇಂದ್ರ ಸರ್ಕಾರದ ಜತೆ ದಿಲ್ಲಿಯಲ್ಲಿನ ಅಧಿಕಾರ ಹಂಚಿಕೆ ಕುರಿತಂತೆ ಸಂಘರ್ಷದಲ್ಲಿ ತೊಡಗಿರುವ ಆಪ್ ನೇತಾರ ಹಾಗೂ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದರು. ದಿಲ್ಲಿ ಸರ್ಕಾರದಿಂದ ಅಧಿಕಾರ ಕಿತ್ತುಕೊಳ್ಳುವ ಕೇಂದ್ರದ ಸುಗ್ರೀವಾಜ್ಞೆಗೆ ಭಾರಿ ವಿರೋಧ ವ್ಯಕ್ತಪಡಿಸಿದ್ದು, ಎಲ್ಲ ವಿಪಕ್ಷಗಳು ಒಂದಾದರೆ ಸುಗ್ರೀವಾಜ್ಞೆಯನ್ನು ರಾಜ್ಯಸಭೆಯಲ್ಲಿ ಸೋಲಿಸಬಹುದು ಎಂದಿದ್ದರು.