ಉಪಚುನಾವಣೆಯಲ್ಲಿ I.N.D.I.A ಒಕ್ಕೂಟಕ್ಕೆ 10ರಲ್ಲಿ ಜಯ, ಬಿಜೆಪಿಗೆ ಎರಡು ಸೀಟು!

ಹೊಸದಿಗಂತ ಡಿಜಿಟಲ್ ಡೆಸ್ಕ್:

7 ರಾಜ್ಯಗಳ 13 ವಿಧಾನಸಭೆ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯಲ್ಲಿ I.N.D.I.A ಒಕ್ಕೂಟವು ಪ್ರಾಬಲ್ಯ ಸಾಧಿಸಿದೆ.
I.N.D.I.A ಒಕ್ಕೂಟವು 10 ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಬಿಜೆಪಿಯು 2 ಕ್ಷೇತ್ರಗಳಲ್ಲಿ ಗೆದ್ದಿದೆ. ಒಬ್ಬ ಸ್ವತಂತ್ರ ಅಭ್ಯರ್ಥಿಯು ಗೆಲುವು ಸಾಧಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಪಕ್ಷವು ಕ್ಲೀನ್‌ ಸ್ವೀಪ್‌ ಮಾಡಿದೆ. ಚುನಾವಣೆ ನಡೆದ ನಾಲ್ಕಕ್ಕೆ ನಾಲ್ಕೂ ಕ್ಷೇತ್ರಗಳಲ್ಲಿ ಟಿಎಂಸಿ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ತಲಾ 2 ಕ್ಷೇತ್ರಗಳನ್ನು ವಶಪಡಿಸಿಕೊಂಡಿದೆ. ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷವು 1 ಕ್ಷೇತ್ರ ಹಾಗೂ ಬಿಹಾರದ ರುಪೌಲಿ ವಿಧಾನಸಭೆ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಅಭ್ಯರ್ಥಿಯು ಗೆಲುವು ಸಾಧಿಸಿದ್ದಾರೆ.

ಬಿಜೆಪಿಯು ಹಿಮಾಚಲ ಪ್ರದೇಶ ಹಾಗೂ ಮಧ್ಯಪ್ರದೇಶದಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿದೆ.

ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಪತ್ನಿ ಕಾಂಗ್ರೆಸ್‌ನ ಕಮಲೇಶ್ ಠಾಕೂರ್ ಡೆಹ್ರಾದಲ್ಲಿ ಗೆಲುವು ಸಾಧಿಸಿದ್ದಾರೆ. ಪಂಜಾಬ್‌ನ ಜಲಂಧರ್ ಪಶ್ಚಿಮ ಕ್ಷೇತ್ರದಲ್ಲಿ ಆಮ್‌ ಆದ್ಮಿ ಪಕ್ಷ (AAP) ಗೆದ್ದಿದ್ದಾರೆ. ಪಶ್ಚಿಮ ಬಂಗಾಳದ ರಾಯ್‌ಗಂಜ್‌, ರಣಘತ್ ದಕ್ಷಿಣ, ಬಾಗ್ಡಾ ಮತ್ತು ಮಾನಿಕ್ತಾಲಾ ಕ್ಷೇತ್ರಗಳಲ್ಲಿ ಕಟಿಎಂಸಿ, ಉತ್ತರಾಖಂಡದ ಬದ್ರಿನಾಥ್ ಮತ್ತು ಮಂಗ್ಲೌರ್‌ನಲ್ಲಿ ಕಾಂಗ್ರೆಸ್, ಪಂಜಾಬ್‌ನ ಜಲಂಧರ್ ವೆಸ್ಟ್‌ನಲ್ಲಿ ಟಿಎಂಸಿ ಗೆಲುವು ಸಾಧಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!