ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಬಿಐ (CBI) ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ವಿಚಾರಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ಮಾಡಿದ್ದ ಷಡ್ಯಂತ್ರದ ವಿರುದ್ಧ ನನಗೆ ಜಯ ಸಿಕ್ಕಿದೆ ಎಂದು ಹೇಳಿದ್ದಾರೆ.
ನಾವೆಲ್ಲಾ ಕಷ್ಟ ಪಟ್ಟು ಶ್ರಮ ಪಟ್ಟು ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ನಮ್ಮ ಮೇಲೆ ಬಿಜೆಪಿ ಸರ್ಕಾರ ಸಾಕಷ್ಟು ಷಡ್ಯಂತ್ರ ಮಾಡಿದೆ. ಸಾವಿರಾರು ಕೇಸ್ ದಾಖಲಿಸಿದೆ ಎಂದು ಆರೋಪಿಸಿದ್ದಾರೆ.
ನಾನು ಏನೂ ತಪ್ಪು ಮಾಡಿಲ್ಲ ಎಂದು ಅಂದೇ ಹೇಳಿದ್ದೆ. ಈಗ ನನಗೆ ಜಯ ಸಿಕ್ಕಿದೆ. ನನ್ನ ಪರವಾಗಿ ನಿಂತ ಸರ್ಕಾರಕ್ಕೆ, ನನ್ನ ಪರ ವಾದ ಮಾಡಿದ ವಕೀಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.
ಸಿಬಿಐನವರೆ ಈ ಪ್ರಕರಣಕ್ಕೆ ಅಷ್ಟು ತಲೆಕೆಡಿಸಿಕೊಂಡಿಲ್ಲ. ಯತ್ನಾಳ್‍ಗೂ ಈ ಪ್ರಕರಣಕ್ಕೂ ಏನು ಸಂಬಂಧ? ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಹೋಗಲಿ. ಅವರಿಗೂ ನ್ಯಾಯಾಲಯ, ನಮಗೂ ನ್ಯಾಯಾಲಯ ಇದೆ. ನಾನು ಸಾಯೋವರೆಗೂ ಈ ರೀತಿ ಕೇಸ್‍ಗಳನ್ನ ಎದುರಿಸಲೇಬೇಕು. ಅದು ಗೊತ್ತಿದೆ ಅವರು ನನ್ನ ಬಿಡಲ್ಲ ಎಲ್ಲವನ್ನೂ ಎದುರಿಸುತ್ತೇನೆ ಎಂದು ಅವರು ಹೇಳಿದ್ದಾರೆ.