ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾಕ್ಕೆ ಗೆಲುವು: ವಿಶೇಷ ಸಂದೇಶ ನೀಡಿದ ಕೊಹ್ಲಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಗ್ಲೆಂಡ್ ಎದುರು ರಾಂಚಿ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಟೀಂ ಇಂಡಿಯಾ 3-1 ಅಂತರದಲ್ಲಿ ಟೆಸ್ಟ್ ಸರಣಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ, ಕೆ ಎಲ್ ರಾಹುಲ್, ಮೊಹಮ್ಮದ್ ಶಮಿ ಅವರಂತಹ ತಾರಾ ಆಟಗಾರರ ಅನುಪಸ್ಥಿತಿಯ ಹೊರತಾಗಿಯೂ ರಾಂಚಿ ಟೆಸ್ಟ್ ಪಂದ್ಯದಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದೆ.

ಇದೀಗ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಇಂಗ್ಲೆಂಡ್ ಎದುರು ಐತಿಹಾಸಿಕ ಗೆಲುವು ದಾಖಲಿಸುತ್ತಿದ್ದಂತೆಯೇ ಸೋಷಿಯಲ್ ಮೀಡಿಯಾದಲ್ಲಿ ವಿಶೇಷ ಪೋಸ್ಟ್ ಹಾಕುವ ಮೂಲಕ ಕೊಹ್ಲಿ ಗಮನ ಸೆಳೆದಿದ್ದಾರೆ.

“ಎಸ್‌..! ಯುವ ತಂಡದಿಂದ ಎಂತಹ ಅದ್ಭುತ ಸರಣಿ ವಿಜಯವಿದು. ನಮ್ಮ ಯುವ ಪಡೆ ಧೈರ್ಯ, ದೃಢತೆ ಹಾಗೂ ಬದ್ಧತೆಯನ್ನು ತೋರಿದೆ” ಎಂದು ವಿರಾಟ್ ಕೊಹ್ಲಿ ಸೋಷಿಯಲ್‌ ಮೀಡಿಯಾವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಗೆಲ್ಲಲು 192 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಟೀಂ ಇಂಡಿಯಾ 5 ವಿಕೆಟ್ ಸ್ಮರಣೀಯ ಗೆಲುವು ಸಾದಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!