ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು: ಜೆಡಿಎಸ್‌ನ ಜಾತ್ಯತೀತ ಮುಖವಾಡ ಕಳಚಿದೆ ಎಂದ ಸಿಎಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಜಯಗಳಿಸಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ ಎಂದಿದ್ದಾರೆ.

ಬಿಜೆಪಿ ಮತ್ತು ಜನತಾದಳ ಪಕ್ಷಗಳು ಒಟ್ಟಾಗಿ ತಮ್ಮ‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಹೊರತಾಗಿಯೂ ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ನಡುವಿನ ಮೈತ್ರಿಯೇ ಹೊರತು ಎರಡೂ ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಜಾತ್ಯತೀತ ಮುಖವಾಡ ಕಳಚಿದೆ, ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ ಎಂದು ಹೇಳಿದ್ದಾರೆ.

ಕುಟುಂಬದ ಹಿತಕ್ಕಾಗಿ‌ ಕೋಮುವಾದಿಗಳ ಜೊತೆ ಕೈಜೋಡಿಸಿರುವ ಜೆಡಿಎಸ್ ಪಕ್ಷವನ್ನು ಹಾಗೂ ಸದಾಕಾಲ ಕುಟುಂಬ ರಾಜಕಾರಣದ ವಿರುದ್ಧ ಟೀಕೆ ಮಾಡಿ, ಒಂದು ಕುಟುಂಬವೇ ರಾಜಕೀಯ ಪಕ್ಷದಂತಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿಯನ್ನು ಮತದಾರ ಬಂಧುಗಳ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆಗ್ಯಾರಂಟಿ, ವಾರೆಂಟಿ ಯಾವುದೂ ಇಲ್ಲ. ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!