ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು ಸರ್ಕಾರ ರಚಿಸುವ ತವಕದಲ್ಲಿದೆ. ಇದೀಗ ಸಿಎಂ ಯಾರಾಗ್ತಾರೆ ಎನ್ನೋ ವಿಷಯ ಎಲ್ಲೆಡೆ ಚರ್ಚೆಯಲ್ಲಿದ್ದು, ಇಂದು ಹೈಕಮಾಂಡ್ ತಮ್ಮ ನಿರ್ಧಾರವನ್ನು ಪ್ರಕಟಿಸುವ ಸಾಧ್ಯತೆ ಇದೆ.
ಈಗಾಗಲೇ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ದೆಹಲಿಗೆ ತೆರಳಿದ್ದು, ಹೈ ಕಮಾಂಡ್ ಜೊತೆ ಸಭೆ ನಡೆಸಿದ್ದಾರೆ. ಈ ಬಗ್ಗೆ ಕೊರಟಗೆರೆಯಿಂದ ವಿಧಾನಸಭೆಗೆ ಆಯ್ಕೆಯಾದ ಡಾ. ಜಿ. ಪರಮೇಶ್ವರ ಮಾತನಾಡಿದ್ದಾರೆ.
ಡಿಕೆಶಿ ಹಾಗೂ ಸಿದ್ದರಾಮಯ್ಯ ನಡುವೆ ಕುರ್ಚಿಗಾಗಿ ಪೈಪೋಟಿ ಇರೋದು ಸುಳ್ಳಲ್ಲ, ಆದರೆ ಇದು ಅತಿರೇಕಕ್ಕೆ ಹೋಗೋದಿಲ್ಲ, ಈಸಿಯಾಗಿ ಸೆಟಲ್ ಆಗುತ್ತದೆ. ಕಠಿಣ ಪರಿಶ್ರಮದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈ ವಿಷಯ ಎಲ್ಲರಿಗೂ ಗೊತ್ತಿರುವಂಥದ್ದೇ, ಹಾಗಾಗಿ ಯಾವುದೇ ಸಮಸ್ಯೆ ಬಾರದಂತೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂದು ಹೇಳಿದ್ದಾರೆ/