ರಸ್ತೆಯಲ್ಲಿ ವಿದ್ಯಾರ್ಥಿನಿಯರ ಮಾರಾಮಾರಿ, ವಿಡಿಯೋ ವೈರಲ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪ್ರತಿಷ್ಟಿತ ಶಾಲೆಯೊಂದರ ವಿದ್ಯಾರ್ಥಿನಿಯರು ಬೀದಿಗಿಳಿದು ಹೊಡೆದಾಡಿದ್ದಾರೆ. ಶಾಲಾ ಸಮವಸ್ತ್ರದಲ್ಲಿಯೇ ರಸ್ತೆಗಿಳಿದು ಗಲಾಟೆ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯಾರ್ಥಿನಿಯರ ಶಾಲಾ ಸಮವಸ್ತ್ರ ಆಧರಿಸಿ ಬೆಂಗಳೂರಿನ ಬಿಷಪ್ ಕಾಟನ್ ಶಾಲೆಗೆ ಸೇರಿದವರು ಎನ್ನಲಾಗಿದೆ. ಆದರೆ ಇದುವರೆಗೂ ಶಾಲೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ.

ಸುಮಾರು 20ನಿಮಿಷಗಳ ಕಾಲ ವಿದ್ಯಾರ್ಥಿನಿಯರ ಎರಡು ಗುಂಪುಗಳು ನಡುವೆ ಮಾರಾಮಾರಿ ನಡೆದಿದೆ. ಬೇಸ್‌ಬಾಲ್ ಬ್ಯಾಟ್ ಮೂಲಕ ಹೊಡೆದಾಡಿದ್ದಾರೆ. ಘಟನೆಯಲ್ಲಿ ಕೆಲ ವಿದ್ಯಾರ್ಥಿನಿಯರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಸ್ಥಳೀಯರು ಗಲಾಟೆ ಬಿಡಿಸಲು ಎಷ್ಟೇ ಪ್ರಯತ್ನ ಮಾಡಿದರೂ ಜಡೆ ಜಗಳ ಮುಂದುವರೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಶಾಲಾ ಆಡಳಿತ ಮಂಡಳಿ ಶಿಸ್ತುಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!